ಪೂಕಳತೋಡು ಗ್ರಾಮದಲ್ಲಿ ಅಕ್ರಮ ಮರಳು ಸಾಗಾಟ : ಆರೋಪಿ ಬಂಧನ

30/10/2020

ಮಡಿಕೇರಿ ಅ. 30 : ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಪೂಕಳತೋಡು ಗ್ರಾಮದಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಡಿಸಿಐಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗ್ರಾಮದ ಮುರುಗೇಶ್ ಎಂಬಾತ ರಾತ್ರಿ ಸಮಯದಲ್ಲಿ ತೋಟದಲ್ಲಿ ಹರಿಯುವ ಕಿರುಹೊಳೆಯ ದಡದಲ್ಲಿ ಮರಳು ತುಂಬಿಸಿ ನಿಲ್ಲಿಸಲಾಗಿದ್ದ ಈಚರ್ ಮಿನಿ ಲಾರಿ (ಕೆಎ-೧೨-ಬಿ ೭೫೭೬) ತುಂಬಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿ ದಾಳಿ ನಡೆಸಿ ಆರೋಪಿ ಮುರುಗೇಶ್‌ನನ್ನು ವಶಕ್ಕೆ ಪಡೆದಿದ್ದಾರೆ.
ಮಿನಿ ಲಾರಿ ಮಾಲೀಕ ನೆಲ್ಲಿರ ಉಮೇಶ್ ವಿರುದ್ದ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಯ ಬಗ್ಗೆ ಪೊಲೀಸರು ಬಲೆ ಬೀಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕ್ಷಮಾ ಮಿಶ್ರಾ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಸಿಬ್ಬಂದಿಗಳಾದ ವಿ.ಜಿ ವೆಂಕಟೇಶ್, ಬಿ.ಎಲ್ ಯೊಗೇಶ್ ಕುಮಾರ್, ಕೆ.ಆರ್ ವಸಂತ, ಎಂ.ಎನ್ ನಿರಂಜನ್ ಮತ್ತು ಶ್ರೀಮಂಗಲ ಪೊಲೀಸ್ ಠಾಣೆಯ ಪಿ.ಎಸ್.ಐ. ಕರಿಬಸಪ್ಪ ಕಾರ್ಯಚರಣೆಯಲ್ಲಿ ಇದ್ದರು.