ಅ. 31 ರಂದು ಕಾಂಗ್ರೆಸ್‍ನಿಂದ ಇಂದಿರಾ ಸಂಸ್ಮರಣಾ ದಿನಾಚರಣೆ

30/10/2020

ಮಡಿಕೇರಿ ಅ.30 : ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅ.31 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಸಂಸ್ಮರಣಾ ದಿನವನ್ನು ಆಚರಿಸಲಾಗುವುದೆಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಬೆಳಗ್ಗೆ 10.30 ಗಂಟೆಗೆ ನಗರದ ಗಣಪತಿ ಬೀದಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಸ್ಮರಣೆಯೊಂದಿಗೆ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ಆಚರಿಸಲಾಗುವುದು. ಅಲ್ಲದೆ ರೈತ ಕಿಸಾನ್ ಅಧಿಕಾರ್ ದಿವಸ್ ಕಾರ್ಯಕ್ರಮ ಕೂಡ ನಡೆಯಲಿದೆ. ನಂತರ 11.30 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು. ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಾಗುವಂತೆ ಮಂಜುನಾಥ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.