ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 4,866

ಮಡಿಕೇರಿ ಅ.30 : ಜಿಲ್ಲೆಯಲ್ಲಿ ಶುಕ್ರವಾರ 25 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 23 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಪತ್ತೆಯಾಗಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4866 ಆಗಿದ್ದು, 4565 ಮಂದಿ ಗುಣಮುಖರಾಗಿದ್ದಾರೆ. 233 ಸಕ್ರಿಯ ಪ್ರಕರಣಗಳಿದ್ದು, 68 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 187 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 09 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 09 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.