ಬಾಳೆಕಾಡು ಬಳಿ ಓಮ್ನಿ- ಬೈಕ್ ನಡುವೆ ಡಿಕ್ಕಿ : ಓರ್ವನ ಸ್ಥಿತಿ ಗಂಭೀರ

30/10/2020

ಸುಂಟಿಕೊಪ್ಪ,ಅ.30: ಬೈಕ್-ಓಮ್ನಿ ನಡುವೆ ಡಿಕ್ಕಿಯಾದ ಪರಿಣಾಮ ಬೈಕು ಸವಾರ ಗಂಭೀರ ಗಾಯಗಳಿಂದ ಆಸ್ಪತ್ರೆಗೆ ದಾಖಲಾದ ಘಟನೆ ಸಮೀಪದ ಬಾಳೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮಡಿಕೇರಿಯಿಂದ ಸುಂಟಿಕೊಪ್ಪದತ್ತ ಬರುತ್ತಿದ್ದ ಓಮ್ನಿ ಮತ್ತು ಸುಂಟಿಕೊಪ್ಪ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕು ನಡುವೆ ಡಿಕ್ಕಿ ಸಂಭವಿಸಿದೆ.
ಈ ರಸ್ತೆ ಅಪಘಾತದಲ್ಲಿ ನಿತಿನ್ ಪೂಜಾರಿ ಎಂಬ ಯುವಕನ ತಲೆ ಮತ್ತು ಕಾಲಿನ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿದ್ದು, ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.