ಕನ್ನಡದಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸೋಮವಾರಪೇಟೆಯಲ್ಲಿ ಸನ್ಮಾನ

30/10/2020

ಸೋಮವಾರಪೇಟೆ ಅ.30 : ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ತಹಸೀಲ್ದಾರ್ ಗೋವಿಂದರಾಜು ಅಧ್ಯಕ್ಷತೆ ತಹಸೀಲ್ದಾರ್ ಕಚೇರಿಯಲ್ಲಿ ನಡೆಯಿತು.
ನ.1ರಂದು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ತೀರ್ಮಾನಿಸಲಾಯಿತು. 9.30 ಕ್ಕೆ ತಹಸೀಲ್ದಾರ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಹತ್ತನೆ ತರಗತಿಯ ಕನ್ನಡ ಪರೀಕ್ಷೆಯಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ.