ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ

30/10/2020

ಸುಂಟಿಕೊಪ್ಪ,ಅ.30: ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗ್ರಾಮ ಪಂಚಾಯಿತಿ,ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನ.1ರಂದು ಕನ್ನಡ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಎಂ.ಎಸ್.ಸುನಿಲ್ ವಹಿಸಲಿದ್ದು, ದ್ವಜಾರೋಹಣವನ್ನು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಕೆ.ಟಿ.ದರ್ಶನ್ ನೆರವೇರಿಸಿ ಮಾತನಾಡಲಿದ್ದಾರೆ.
ಇದೇ ವೇಳೆ ರಾಷ್ಟ್ರಪತಿ ಪದಕ ಪಡೆದಿರುವ ಕುಶಾಲನಗರ ಡಿವೈಎಸ್‍ಪಿ ಶೈಲೇಂದ್ರ ಅವರನ್ನು ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ.ಚಂದ್ರಕಲಾ, ತಾಲ್ಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ.ಪಿಡಿಒ ವೇಣುಗೋಪಾಲ್, ಮಾಜಿ ಸದಸ್ಯರುಗಳು, ವಿವಿಧ ಇಲಾಖೆಗಳ ಮುಖ್ಯಸ್ಥರು, ಕನ್ನಡ ಸಂಘಗಳ ಅಧ್ಯಕ್ಷರುಗಳು,ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಉಪಸ್ಥಿತರಿರುವರು ಎಂದು ಕಸಾಪ ಪ್ರಧಾನ ಕಾರ್ಯದರ್ಶಿ ಸತೀಶ್ ಶೇಟ್ ತಿಳಿಸಿದ್ದಾರೆ.