ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4892

October 31, 2020

ಮಡಿಕೇರಿ ಅ. 31 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 26 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
20 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 6 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 3 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4892 ಆಗಿದ್ದು, 4616 ಮಂದಿ ಗುಣಮುಖರಾಗಿದ್ದಾರೆ. 208
ಸಕ್ರಿಯ ಪ್ರಕರಣಗಳಿದ್ದು, 68 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 182 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!