ಲಿಫ್ಟ್ ಗುಂಡಿಗೆ ಬಿದ್ದು ಮಗು ಸಾವು

31/10/2020

ಬೆಂಗಳೂರು ಅ.31 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಗರದ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿನೋದ್ಕುಮಾರ್ ಮೃತಪಟ್ಟ ಮಗು. ಮೃತ ಮಗುವಿನ ತಂದೆ ಮೂಲತಃ ಕೊಪ್ಪಳ ತಾಲ್ಲೂಕಿನವರಾಗಿದ್ದು, ಬಿಜಿಎಸ್ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಂಪತಿ, ನಿರ್ಮಾಣ ಹಂತದ ಕಟ್ಟಡ ಬಳಿಯ ಶೆಡ್ನಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ರಮೇಶ್ ಎಂಬುವರಿಗೆ ಸೇರಿದ್ದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿತ್ತು. ಇಂದು ಬೆಳಗ್ಗೆ ತಂದೆ ಕೆಲಸಕ್ಕೆ ತೆರಳಿದ್ದು, ತಾಯಿ ಸ್ನಾನ ಮಾಡುತ್ತಿದ್ದ ಸಮಯದಲ್ಲಿ ಮಗು ಆಟವಾಡುತ್ತಾ ಗುಂಡಿ ಬಳಿ ಹೋಗಿ ಬಿದ್ದಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.