ರಾಷ್ಟ್ರೀಯ ಏಕತಾ ದಿನ : ಪ್ರತಿಜ್ಞಾ ವಿಧಿ ಸ್ವೀಕಾರ

31/10/2020

ಮಡಿಕೇರಿ ಅ.31 : ಜಿಲ್ಲಾಡಳಿತ ವಯಿಯಿಂದ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪ್ರತಿಜ್ಞಾ ವಿಧಿ ಭೋಧಿಸಿದರು.

ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ಅರ್ಪಿಸುಕೊಳ್ಳುತ್ತೇವೆ ಮತ್ತು ದೇಶ ಭಾಂಧವರರಲ್ಲಿ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ಪ್ರಜ್ಞಾಪೂರ್ವಕವಾಗಿ ಪ್ರತಿಜ್ಞೆ ಮಾಡಲಾಯಿತು.
ರಾಷ್ಟ್ರದ ಪ್ರಥಮ ಗೃಹ ಸಚಿವರಾದ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿ ಕಾಪಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ತಮ್ಮದೇ ಆದ ಕೊಡುಗೆ ನೀಡುತ್ತೇನೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್, ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.