ಜಿಲ್ಲಾಡಳಿತದಿಂದ ಎನ್‌ಡಿಆರ್‌ಎಫ್ ತಂಡಕ್ಕೆ ಬೀಳ್ಕೊಡುಗೆ

ಮಡಿಕೇರಿ ಅ. 31 : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಎನ್‌ಡಿಆರ್‌ಎಫ್ ತಂಡಕ್ಕೆ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಶನಿವಾರ ಬೀಳ್ಕೊಡಲಾಯಿತು.
ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಸಂಕಷ್ಟ ಉಂಟಾಯಿತು ಎಂದರು.
ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಸಂಭವಿಸಿದ ಭೂಕುಸಿತದಿಂದ ತಲಕಾವೇರಿಯ ಪ್ರಧಾನ ಅರ್ಚಕರಾದ ನಾರಾಯಣಚಾರ್ ಮತ್ತು ಕುಟುಂಬದವರು ಕಣ್ಮರೆಯಾದರು. ಪ್ರಧಾನ ಅರ್ಚಕರ ಕುಟುಂಬ ಸದಸ್ಯರ ಮೃತ ದೇಹ ಪತ್ತೆ ಹಚ್ಚುವಲ್ಲಿ ಎನ್‌ಡಿಆರ್‌ಎಫ್ ತಂಡವು ಹಲವು ತೊಂದರೆಗಳ ನಡುವೆಯೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರದೊಂದಿಗೆ ಶ್ರಮಿಸಿದ್ದು, ಜಿಲ್ಲಾಡಳಿತ ವತಿಯಿಂದ ಧನ್ಯವಾದ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿ?ಧಿಕಾರಿ ಕ್ಷಮಾಮಿಶ್ರ ಅವರು ಮಾತನಾಡಿ ಎನ್‌ಡಿಆರ್‌ಎಫ್ ತಂಡದ ಧೈರ್ಯ ಮತ್ತು ಸಾಹಸವು ಸ್ಪೂರ್ತಿದಾಯಕ, ಮಳೆ, ಚಳಿ, ಗಾಳಿ ಎನ್ನದೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಪೊಲೀಸ್ ಇಲಾಖೆ ವತಿಯಿಂದ ತಂಡಕ್ಕೆ ಹೃದಯ ಸ್ಪರ್ಶಿ ಧನ್ಯವಾದ ಎಂದು ತಿಳಿಸಿದರು.
ಜಿ.ಪಂ.ಸಿಇಒ.ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್, ಡಿವೈಎಸ್‌ಪಿ. ದಿನೇಶ್ ಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಪೊಲೀಸ್ ಇನ್ಸ್‌ಪೇಕ್ಟರ್ ಅನೂಪ್ ಮಾದಪ್ಪ, ಎನ್‌ಡಿಆರ್‌ಎಫ್ ಸಿಬ್ಬಂದಿಗಳು ಇತರರು ಇದ್ದರು.

