ನ.1 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

31/10/2020

ಮಡಿಕೇರಿ ಅ.31 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ನ. 1 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ನವೆಂಬರ್, 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಗ್ಗೆ 11.30 ಗಂಟೆಗೆ ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.