ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ : ಗಣ್ಯರಿಂದ ಗೌರವ ನಮನ ಸಲ್ಲಿಕೆ

October 31, 2020

ಮಡಿಕೇರಿ ಅ.31 : ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಶನಿವಾರ ಜರುಗಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾ? ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿನ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಣ್ಯರು ಗೌರವ ನಮನ ಸಲ್ಲಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಡೇಪಂಡ ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊಂಬಾರನ ಜಿ.ಬೋಪಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ವಿಧಾನ ಪರಿ?ತ್ ಸದಸ್ಯರಾದ ಮಂಡೇಪಂಡ ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ಅರೆಭಾ? ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಕ್ಷಮಾಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಪುದಿಯ ನೆರವನ ಮಹೇಶ್, ಡಿವೈಎಸ್‌ಪಿ ಬಾರಿಕೆ ದಿನೇಶ್ ಕುಮಾರ್, ಕನ್ನಡ ಸಾಹಿತ್ಯ ಪರಿ?ತ್ ಜಿಲ್ಲಾ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸರ್ವೋದಯ ಸಮಿತಿ ಜಿಲ್ಲಾ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ನಗರಸಭೆ ಮಾಜಿ ಅಧ್ಯಕ್ಷರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಹೊಸೂರು ರಮೇಶ್ ಜೋಯಪ್ಪ, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷರಾದ ಪೈಕೇರ ಮನೋಹರ್, ಗುಡ್ಡೆಮನೆ ರಮೇಶ್ ಇತರರು ಸ್ವಾತಂತ್ರ್ಯ ವೀರ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡ ಅವರಿಗೆ ಗೌರವ ನಮನ ಸಲ್ಲಿಸಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ದಂಬೇಕೋಡಿ ಆನಂದ, ಬೈತಡ್ಕ ಜಾನಕಿ ಬೆಳ್ಯಪ್ಪ, ಧನಂಜಯ ಅಗೋಳಿಕಜೆ, ಸ್ಮೀತಾ ಅಮೃತರಾಜ್, ಪ್ರೇಮ ರಾಘವಯ್ಯ ಚೊಕ್ಕಾಡಿ, ಪುರುಷೋತ್ತಮ ಕಿರ್ಲಾಯ, ಡಾ.ಪುರುಷೋತ್ತಮ ಕರಂಗಲ್ಲು, ಡಾ.ವಿಶ್ವನಾಥ ಬದಿಕಾನ, ಡಾ.ಕೆ.ಸಿ.ದಯಾನಂದ, ಜಯಪ್ರಕಾಶ್, ಕುಸುಮಾಧರ್, ಕಿರಣ್ ಕುಂಬಳಚೇರಿ, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ, ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಇತರರು ಇದ್ದರು.
ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಕುರಿತು ರಾಜ್ಯ ಶಿಕ್ಷಕರ ಪ್ರಶಸ್ತಿ ವಿಜೇತರಾದ ಪುದಿಯ ನೆರವನ ರೇವತಿ ರಮೇಶ್ ಮತ್ತು ತಂಡದವರು ನಮನಗೀತೆ ಹಾಡಿದರು.
ಸಂಸ್ಮರಣಾ ಕಾರ್ಯಕ್ರಮದ ಆರಂಭದಲ್ಲಿ ಅಕಾಡೆಮಿ ಸದಸ್ಯರಾದ ಧನಂಜಯ ಅಗೋಳಿಕಜೆ ಅವರು ಸ್ವಾಗತಿಸಿ, ನಿರೂಪಿಸಿದರು, ಡಾ.ಕೆ.ಸಿ.ದಯಾನಂದ ಅವರು ವಂದಿಸಿದರು.
ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರನ್ನು ಗಲ್ಲಿಗೇರಿಸಿದ ನಗರದ ಕೋಟೆಯ ಸ್ಥಳದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗುಡ್ಡೆಮನೆ ಕುಟುಂಬದವರು ಹಾಗೂ ಇತರರು ಪುಷ್ಪ ನಮನ ಸಲ್ಲಿಸಿದರು. ಬಳಿಕ ಪ್ರೇಮ ರಾಘವಯ್ಯ ಮತ್ತು ಶಾರದ ನಾಗೇಶ್ ಅವರು ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಲಾವಣಿ ಪದ ಹಾಡಿದರು.

error: Content is protected !!