ಇಂದಿರಾಗಾಂಧಿ ಅಭಿಮಾನಿಗಳ ಸಂಘದಿಂದ ಸೋಮವಾರಪೇಟೆಯಲ್ಲಿ ಇಂದಿರಾ ಸ್ಮರಣೆ

31/10/2020

ಸೋಮವಾರಪೇಟೆ ಅ.31 : ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಎ. ಯಾಕೂಬ್, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್, ಸಹ ಕಾರ್ಯದರ್ಶಿ ಅಜಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು.