ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖ

01/11/2020

ಮಡಿಕೇರಿ ನ.1 : ಕೊಡಗು ಜಿಲ್ಲೆಯಲ್ಲಿ ಭಾನುವಾರ 20 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಈ ದಿನ 8 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ. ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 12 ಪ್ರದೇಶವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. ಇಂದು 44 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 70088 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಪಾಸಿಟಿವ್ ಪ್ರಕರಣಗಳು 4912, ನೆಗೆಟಿವ್ ಪ್ರಕರಣಗಳು 64959, ವರದಿ ನಿರೀಕ್ಷಿತ ಪ್ರಕರಣಗಳು 217, ಮೃತಪಟ್ಟ ಪ್ರಕರಣಗಳು 68 ಆಗಿದೆ.
ಮಡಿಕೇರಿ ಕೋವಿಡ್ ಆಸ್ಪತ್ರೆ 39, ಕೋವಿಡ್ ಕೇರ್ ಸೆಂಟರ್ 31, ಹೋಂ ಐಸೋಲೇಶನ್ ನಲ್ಲಿ 76 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.