ಕೊಡಗು ಕನ್ನಡ ಸಾಹಿತ್ಯ ಪರಿಷತ್ ನಿಂದ ಕನ್ನಡ ರಾಜ್ಯೋತ್ಸವ

01/11/2020

ಮಡಿಕೇರಿ ನ.1 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ನಿರ್ದೇಶಕ ಕೋಡಿ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ ಮಡಿಕೇರಿ ತಾಲ್ಲೂಕು ಕಾರ್ಯದರ್ಶಿ ಡಾ.ದಯಾನಂದ ಕೆ.ಸಿ, ಸದಸ್ಯರಾದ ಕವಿತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮಣಜೂರು ಮಂಜುನಾಥ್ ಮತ್ತಿತರರು ಹಾಜರಿದ್ದರು.