ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ

November 1, 2020

ಮಡಿಕೇರಿ : ಕನ್ನಡ ರಾಜ್ಯೋತ್ಸವದ ದಿನವಾದ ನ.1 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ಕೊಡಗು ಕರ್ನಾಟಕದೊಂದಿಗೆ ವಿಲೀನವಾದ ನಂತರ ಆಡಳಿತ ವ್ಯವಸ್ಥೆ ಕೊಡವರನ್ನು ಕಡೆಗಣಿಸಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದರು. ಆಡಳಿತ ವ್ಯವಸ್ಥೆಗಳ ನಿರ್ಲಕ್ಷ್ಯವನ್ನು ಖಂಡಿಸಿ ಮತ್ತು ಕೊಡವರಿಗೆ ಬುಡಕಟ್ಟು ಜನಾಂಗದ ಸ್ಥಾನಮಾನವನ್ನು ನೀಡಬೇಕೆಂದು ಒತ್ತಾಯಿಸಿ ಕನ್ನಡ ರಾಜ್ಯೋತ್ಸವ ಸಂದರ್ಭ ಧರಣಿ ನಡೆಸುತ್ತಿರುವುದಾಗಿ ಹೇಳಿದರು. ಜಿಲ್ಲಾ ಕ್ರೀಡಾಂಗಣದ ಬಳಿಯ ಮೈದಾನದಲ್ಲಿ ಧರಣಿ ನಡೆಯಿತು. ಸಿಎನ್ ಸಿ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!