ಕೊಡಗಿನಲ್ಲಿ ಕೋವಿಡ್ : 4698 ಮಂದಿ ಗುಣಮುಖ

November 2, 2020

ಮಡಿಕೇರಿ ನ. 2 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 16 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 8 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 7 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4928 ಆಗಿದ್ದು, 4698 ಮಂದಿ ಗುಣಮುಖರಾಗಿದ್ದಾರೆ. 162
ಸಕ್ರಿಯ ಪ್ರಕರಣಗಳಿದ್ದು, 68 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 178 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!