ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ನ. 30ರ ವರೆಗೆ ಅವಧಿ ವಿಸ್ತರಣೆ

02/11/2020

ಮಡಿಕೇರಿ ನ.2 : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2020-21 ನೇ ಸಾಲಿಗೆ ಮೆಟ್ರಿಕ್ ಪೂರ್ವ/ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್, 30 ರವರೆಗೆ ಮುಂದೂಡಲಾಗಿದೆ.

ಅಗತ್ಯ ಮಾಹಿತಿಗೆ ಇಲಾಖಾ ವೆಬ್‍ಸೈಟ್ https://gokdom.kar.nic.in ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್‍ಎಂಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ಅವರು ತಿಳಿಸಿದ್ದಾರೆ.