ಕನ್ನಡ ರಾಜ್ಯೋತ್ಸವ : ಸೋಮವಾರಪೇಟೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸಾಧಕರಿಗೆ ಸನ್ಮಾನ

02/11/2020

ಸೋಮವಾರಪೇಟೆ ನ. 2 : ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸಾಧಕರಿಗೆ ಸನ್ಮಾನ ಹಾಗೂ ಕೂರ್ಗ್‍ಸ್ಟಾರ್ ಮೆಲೋಡೀಸ್ ತಂಡದಿಂದ ಕನ್ನಡ ಗೀತಗಾಯನ ಕಾರ್ಯಕ್ರಮ ಸಾಕ್ಷಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕುಶಾಲನಗರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಶಿವಶಂಕರ್, ಹಿರಿಯ ನಾಗರಿಕ ಎ.ಪಿ.ಶಂಕರಪ್ಪ, ಪತ್ರಕರ್ತ ಟಿ.ಆರ್.ಪ್ರಭುದೇವ್, ಗಾಯಕ ಪೀಟರ್, ರಂಗಭೂಮಿ ಕಲಾವಿದ ಪರಮೇಶ್, ಕೂರ್ಗ್‍ಸ್ಟಾರ್ ಮೆಲೋಡಿಸ್‍ನ ಸಂಸ್ಥಾಪಕ ಆನಂದ್ ಅವರುಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕರವೇ ತಾಲೂಕು ಅಧ್ಯಕ್ಷ ಕೆ.ಎನ್.ದೀಪಕ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್.ಜೆ.ಜವರಪ್ಪ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್.ಮಹೇಶ್, ಉದ್ಯಮಿ ಹರಪಳ್ಳಿ ರವೀಂದ್ರ, ಆರಕ್ಷಕ ವೃತ್ತನಿರೀಕ್ಷಕ ಮಹೇಶ್,ಠಾಣಾಧಿಕಾರಿ ವಿನಯ್ ಕುಮಾರ್, ಸಾಹಿತಿ ಜಲಾಕಾಳಪ್ಪ, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕರವೇ ಸಾಹಿತ್ಯ ಘಟಕದ ಅಧ್ಯಕ್ಷ ಕೆ.ಪಿ.ಸುದರ್ಶನ್ ಮತ್ತಿತರರು ಇದ್ದರು.