ಮಡಿಕೇರಿ ತಾ.ಪಂ ಸಭೆ : ಸಕಾಲದಲ್ಲಿ ಅನುದಾನ ಬಳಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಿ : ಶೋಭಾ ಮೋಹನ್ ಸೂಚನೆ

November 3, 2020

ಮಡಿಕೇರಿ ನ.3 : ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಲಾಗಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಕುಮಾರ್ ಅವರು ಸೂಚನೆ ನೀಡಿದ್ದಾರೆ.
ನಗರದ ತಾ.ಪಂ.ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲ ಮುಗಿಯುತ್ತ ಬಂದಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ಚುರುಕುಗೊಳ್ಳಬೇಕು. ಈಗಾಗಲೇ ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನದ ಸದ್ಭಳಕೆಯಾಗಬೇಕು. ಸಾರ್ವಜನಿಕರ ಕುಂದು ಕೊರತೆಯನ್ನು ಅರಿತು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಕೃಷಿ ಮತ್ತು ತೋಟಗಾರಿಕಾ ಇಲಾಖೆ ವತಿಯಿಂದ ಇರುವ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ತಲುಪಿಸುವಂತೆ ಅವರು ಸೂಚಿಸಿದರು.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಅವರು ಮಾತನಾಡಿ ಮಳೆ ಹಾನಿಯಿಂದಾಗಿ ಜಿಲ್ಲೆಯಲ್ಲಿ ಹಲವಾರು ಕಡೆ ಬರೆಗಳು ಕುಸಿದಿದ್ದು ತಾತ್ಕಾಲಿಕವಾಗಿ ತೆರವುಗೊಳಿಸಿದ್ದಾರೆ. ಆದರೆ ಆ ಕಾರ್ಯವು ಪೂರ್ಣಗೊಂಡಿಲ್ಲ ಹಾಗೂ ರಸ್ತೆಗಳು ಹಾಳಾಗಿದ್ದು ಅದನ್ನು ಕೂಡಲೇ ಸರಿಪಡಿಸಿ ಎಂದರು.
ಈ ಸಂದರ್ಭ ಉತ್ತರಿಸಿದ ಜಿ.ಪಂ.ಎಇಇ. ಶ್ರೀಕಂಠಯ್ಯ ಅವರು ಮಳೆಯ ಕಾರಣ ದುರಸ್ತಿಗೊಂಡ ರಸ್ತೆಗಳ ಕಾಮಗಾರಿಯನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಮಳೆಯು ಇದೀಗ ಬಿಡುವು ಕೊಟ್ಟಿದೆ ಕಾಮಗಾರಿಯನ್ನು ಶೀಘ್ರವಾಗಿಯೇ ಪೂರ್ಣಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ದಯಾನಂದ ಅವರು ಮಾತನಾಡಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಲಾಗುತ್ತಿದೆ ಎಂದು ಅವರು ತಿಳಿಸಿದರು.
ಕೃಷಿ ಇಲಾಖೆಯ ಅಧಿಕಾರಿ ಗಿರೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಶೇ.97.5 ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.
ತಾ.ಪಂ.ಇಒ ಲಕ್ಷ್ಮಿ ಅವರು ಮಾತನಾಡಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 10 ಉದ್ಯಾನವನ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿಯ ಕಟ್ಟಡವು ಹಳೆಯದಾಗಿರುವುದರಿಂದ ಹೊಸ ಕಟ್ಟಡದ ನಿರ್ಮಾಣವು ಶೀಘ್ರದಲ್ಲಿ ಪ್ರಾರಂಭವಾಗುವುದು ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು. ಜೊತೆಗೆ ಇಲಾಖೆಗಳಲ್ಲಿ ಕನ್ನಡಾನುμÁ್ಠನ ಸಂಬಂಧ ಚರ್ಚಿಸಲಾಯಿತು.
ತಾ.ಪಂ.ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸ್ನೇಹ, ವೈದ್ಯಾಧಿಕಾರಿ ಡಾ.ಚೇತನ್, ಸಹಕಾರ ಇಲಾಖೆಯ ಸಂದೀಪ್ ಇತರರು ಹಾಜರಿದ್ದರು.

error: Content is protected !!