ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4941

November 3, 2020

ಮಡಿಕೇರಿ ನ.3 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 13 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 3 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4941 ಆಗಿದ್ದು, 4733 ಮಂದಿ ಗುಣಮುಖರಾಗಿದ್ದಾರೆ. 139
ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 167 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.