ಸರ್ಕಾರದ ಸುತ್ತೋಲೆ ಆಘಾತಕಾರಿಯಾಗಿದೆ : ಡಿಸಿಸಿ ಬ್ಯಾಂಕ್ ಆಕ್ಷೇಪ

03/11/2020

ಮಡಿಕೇರಿ ನ. 3 : ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವಾರ್ಷಿಕ ಮಹಾಸಭೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಗಣಪತಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ಇದೇ ಅ.15 ರಂದು ಹೊರಡಿಸಿರುವ ಸುತ್ತೋಲೆ ಆಘಾತಕಾರಿಯಾಗಿದೆ ಎಂದರು. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ಸರ್ಕಾರಕ್ಕೆ ಕಳುಹಿಸಲು ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ ಅನುಮೋದನೆ ನೀಡಬೇಕೆಂದು ಮನವಿ ಮಾಡಿದರು.