ಚಾಣಾಕ್ಷ ನಡೆಯಿಂದ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ : ಸಂಸದ ಪ್ರತಾಪ್ ಸಿಂಹ

03/11/2020

ಮಡಿಕೇರಿ ನ. 3 : ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಚಾಣಾಕ್ಷ ನಡೆಯಿಂದ ಕುಶಾಲನಗರ ಪ.ಪಂ ಯ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ ಎಂದು ಮೈಸೂರು, ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.
ಪ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂದರ್ಭ ಹಾಜರಿದ್ದು ಮತದಾನ ಮಾಡಿದ ಸಂಸದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಡಿಎಸ್ ನಿಂದ ಬಂಬಲ ದೊರೆತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.