ಬಾಳುಗೋಡಿನ ಏಕಲವ್ಯ ಮಾದರಿ ಪದವಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

03/11/2020

ಮಡಿಕೇರಿ ನ. 3 : ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಗ್ರಾಮದ ಏಕಲವ್ಯ ಮಾದರಿ ವಸತಿ ಕಾಲೇಜಿನಲ್ಲಿ 2020-21ನೇ ಸಾಲಿಗೆ ಪ್ರಥಮ ಪಿಯುಸಿ ತರಗತಿಯ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೀಸಲಾತಿಗನುಗುಣವಾಗಿ ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕೃತಗೊಳ್ಳದಿರುವುದರಿಂದ ಅರ್ಜಿ ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗಿದ್ದು, ಆಸಕ್ತ ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್, 10 ರೊಳಗೆ ಬಾಳುಗೋಡಿನ ಏಕಲವ್ಯ ಮಾದರಿ ಪದವಿ ಕಾಲೇಜಿನ ಕಚೇರಿಗೆ ಸಲ್ಲಿಸಬೇಕು.
ಏಕಲವ್ಯ ಮಾದರಿ ವಸತಿ ಕಾಲೇಜಿನ ಫಲಿತಾಂಶ 2019-20ನೇ ಸಾಲಿನಲ್ಲಿ ಶೇ.100 ರಷ್ಟಿರುತ್ತದೆ. ಬಾಲಕ-ಬಾಲಕಿಯರಿಗೆ ಪ್ರತ್ಯೇಕ ವಸತಿ ಸೌಲಭ್ಯವಿದೆ. ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಊಟ, ವಸತಿ,ಪಠ್ಯ ಪುಸ್ತಕ, ಸಮವಸ್ತ್ರ ಇನ್ನಿತರ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಪ್ರತ್ಯೇಕ ಸುಸಜ್ಜಿತ ಪ್ರಯೋಗಾಲಯ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ ವ್ಯವಸ್ಥೆ, ಗಣಕ ಯಂತ್ರ ಕೊಠಡಿ ವ್ಯವಸ್ಥೆ ಇದೆ. ವಸತಿ ನಿಲಯಗಳು ಮತ್ತು ಬೋಧನಾ ಕಟ್ಟಡಕ್ಕೆ 24*7 ಸೋಲಾರ್ ವ್ಯವಸ್ಥೆ ಇದೆ. ಹಾಗೂ ಶಾಲಾ ಆವರಣದಲ್ಲಿ ಸಿಸಿ. ಕ್ಯಾಮರ ಅಳವಡಿಸಲಾಗಿದ್ದು, ಉತ್ತಮ ವಾತಾವರಣದ ವ್ಯವಸ್ಥೆ ಇದೆ. ಅರ್ಜಿ ಸಲ್ಲಿಸಲು ಪ್ರಾಂಶುಪಾಲರ ಕಚೇರಿ, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು ವಿರಾಜಪೇಟೆ ತಾಲ್ಲೂಕು ದೂ.ಸಂ. 9483162466, 9982499269 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಸಿ.ಶಿವಕುಮಾರ್ ಅವರು ತಿಳಿಸಿದ್ದಾರೆ.