ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಮಾಹಿತಿ ನೀಡಿ : ಕೊಡಗು ಪೊಲೀಸ್ ಮನವಿ

03/11/2020

ಮಡಿಕೇರಿ ನ.3 : ಕೊಡಗು ಜಿಲ್ಲೆ ಆತಿಥ್ಯಕ್ಕೆ ಹೆಸರಾದ ಪ್ರವಾಸಿ ಕೇಂದ್ರವಾಗಿ ಬೆಳೆಯುತ್ತಿದ್ದು, ಜಿಲ್ಲೆಯಾದ್ಯಂತ ಅನೇಕ ಹೋಂಸ್ಟೇಗಳು, ರೆಸಾರ್ಟ್‍ಗಳು ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿದ್ದರೆ, ಮತ್ತೆ ಕೆಲವು ಕಾನೂನು ಬಾಹಿರವಾಗಿ ನಡೆಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಆರಂಭವಾದಾಗಿನಿಂದ ಅನೇಕ ಪ್ರವಾಸಿಗರು ಮೋಜು ಮಸ್ತಿಯ ನೆಪದಲ್ಲಿ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವುದನ್ನು ಜಿಲ್ಲಾ ಪೊಲೀಸ್ ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಎಲ್ಲಾ ಹೋಂಸ್ಟೇ, ರೆಸಾರ್ಟ್‍ಗಳ ಮೇಲೆ ತೀವ್ರ ನಿಗಾ ಇರಿಸಿದೆ. ಹೋಂಸ್ಟೇಗಳಲ್ಲಿ ಹಾಗೂ ರೆಸಾರ್ಟ್‍ಗಳಲ್ಲಿ ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದರ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋರಿದ್ದಾರೆ.