ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4950

04/11/2020

ಮಡಿಕೇರಿ ನ. 4 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ೮ ಗಂಟೆ ವೇಳೆಗೆ ೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.
೩ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ ೬ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೨ ಹೊಸ ಕೋವಿಡ್-೧೯ ಪ್ರಕರಣ ಕಂಡುಬಂದಿವೆ‌. ಈ ಪೈಕಿ ೨ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೨ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ ೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ ೧ ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು ೪ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೪೯೫೦ ಆಗಿದ್ದು, ೪೭೪೩ ಮಂದಿ ಗುಣಮುಖರಾಗಿದ್ದಾರೆ. ೧೩೮
ಸಕ್ರಿಯ ಪ್ರಕರಣಗಳಿದ್ದು, ೬೯ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೧೪೭ ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.