ಅಮ್ಮತ್ತಿಯಲ್ಲಿ ಜೆಡಿಎಸ್ ಸಭೆ : ಪಕ್ಷ ಬಲವರ್ಧನೆಗೆ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ಕರೆ

November 4, 2020

ಮಡಿಕೇರಿ ನ. 3 : ಕುಮಾರಸ್ವಾಮಿಯವರ ಸಾಧನೆ ಹಾಗೂ ಜನಪರ ಯೋಜನೆಗಳಿಂದ ಮತದಾರರು ಹಾಗೂ ಯುವ ಸಮೂಹ ಜೆಡಿಎಸ್ ಪಕ್ಷದತ್ತ ಹೆಚ್ಚು ಒಲವು ತೋರುತ್ತಿದ್ದು, ಗ್ರಾಮೀಣ ಭಾಗದಿಂದಲೂ ಪಕ್ಷ ಸಂಘಟನೆಯ ಮೂಲಕ ಬಲವರ್ಧನೆಗೆ ಮುಂದಾಗಿದೆ ಎಂದು ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.
ಅಮ್ಮತ್ತಿ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸುಳ್ಳು ಹೇಳಿ ಅಧಿಕಾರ ನಡೆಸುತ್ತಿರುವ ಬಿಜೆಪಿ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಪಕ್ಷದಿಂದ ಜನರು ಬೇಸತ್ತು ಅಪಾರ ಸಂಖ್ಯೆಯಲ್ಲಿ ಪಕ್ಷದೊಂದಿಗೆ ಕೈ ಜೋಡಿಸುತ್ತಿದ್ದಾರೆ.
ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ಜಿಲ್ಲೆಗೆ ಅಪಾರ ಯೋಜನೆಗಳನ್ನು ನೀಡಿದ್ದಾರೆ.
ಪ್ರಕೃತಿ ವಿಕೋಪ ಹಾಗೂ ಪ್ರವಾಹ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿದ್ದ ಕುಟುಂಬಗಳಿಗೆ ಮನೆ ನಿರ್ಮಿಸಿಕೊಟ್ಟು ಬಹುತೇಕ ಮಂದಿಗೆ ಪರಿಹಾರ ನೀಡಿದ್ದಾರೆ. ರೈತರ ಸಾಲಮನ್ನಾ ಸೇರಿದಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಆಡಳಿತ ನಡೆಸಿದ್ದಾರೆ.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ಯಾವುದೇ ಯೋಜನೆಗಳನ್ನು ನೀಡದೆ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಕಡೆಗಣಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷಗಳಿಂದಲೂ ರೈತರು, ಕಾರ್ಮಿಕರು, ಸಾಮಾನ್ಯಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಅಸಾಯಕತೆ ತೋರುತ್ತಿರುವುದರಿಂದ ಕಾಡಾನೆ ಹಾವಳಿ, ರಸ್ತೆಗಳು, ನೀರಿನ ಸಮಸ್ಯೆ, ನಿವೇಶನ ರಹಿತರು, ಸಂತ್ರಸ್ತರು ಸೇರಿದಂತೆ ಸಾಮಾನ್ಯ ಜನರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದರು.
ವಸತಿ ಸಚಿವರಾಗಿರುವ ಉಸ್ತುವಾರಿ ಸಚಿವರು ಜಿಲ್ಲೆಗೆ ಮನೆ ನಿರ್ಮಾಣ ಯೋಜನೆಗಳ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಇದುವರೆಗೆ ಒಂದು ಮನೆಯೂ ನಿರ್ಮಿಸಿ ಕೊಟ್ಟಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಟ್ಟಿರುವದನ್ನು ಬಿಜೆಪಿಯವರು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಅಶಾಂತಿ ಸೃಷ್ಟಿ ಮಾಡುತ್ತಿದ್ದಾರೆ ಹೊರತು ಅಭಿವೃದ್ಧಿಯತ್ತ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ ಅವರು ಸಂತ್ರಸ್ತರ ಹಾಗೂ ನಿವೇಶನ ರಹಿತರು ನ್ಯಾಯಯುತ ಬೇಡಿಕೆಗೆ ಜೆಡಿಎಸ್ ಪಕ್ಷ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸಲು ಮುಂದಾಗಿದೆ ಎಂದರು .
ಜಿಲ್ಲಾ ಜೆಡಿಎಸ್‍ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷೆ ಜಯಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಜ್ ಬೋಪಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಪಾμÁ, ಖಜಾಂಚಿ ಡೆನ್ನಿ ಬರೋಸ್ , ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಲ್ಲಚಂಡ ಗೌತಮ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ನಾಗರಾಜ್, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಪಿ.ಎ ಮಂಜುನಾಥ್, ಉಪಾಧ್ಯಕ್ಷ ಬಾಳೆಕುಟ್ಟಿರಾ ದಿನು ಬೋಪಯ್ಯ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಕ್‍ಖಾನ್, ವಿರಾಜಪೇಟೆ ಕ್ಷೇತ್ರದ ಅಧ್ಯಕ್ಷ ಮತೀನ್, ಯುವಘಟಕದ ಜಿಲ್ಲಾಧ್ಯಕ್ಷ ಜಾಸೀರ್, ಜಿಲ್ಲಾ ಮಹಿಳ ಘಟಕದ ಅಧ್ಯಕ್ಷೆ ಎಂ.ಎ ರುಬೀನಾ, ಮಹಿಳ ಘಟಕ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಕುಶಾಲನಗರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರು, ಕುಶಾಲನಗರ ಘಟಕದ ಉಪಾಧ್ಯಕ್ಷ ಮಹೇಶ್, ಮಡಿಕೇರಿ ಮಹಿಳಾ ಘಟಕದ ಅಧ್ಯಕ್ಷೆ ಸುನಂದ, ಸುಂಠಿಕೊಪ್ಪ ನಗರಅಧ್ಯಕ್ಷ ಕೌಸಿಕ್, ಎಸ್ ಸಿ ಘಟಕದ ಅಧ್ಯಕ್ಷ ರವಿಕುಮಾರ್, ಕುಶಾಲನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕರೀಂ, ಪ್ರಮುಖರಾದ ಯೋಗೀಶ್ ನಾಯ್ಡು ಸೇರಿದಂತೆ ಮತ್ತಿತರರು ಹಾಜರಿದ್ದರು.

error: Content is protected !!