Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:38 AM Friday 22-October 2021

ನಿವೃತ್ತ ಸೇನಾಧಿಕಾರಿ ಮೇಲೆ ಕಾಡಾನೆ ದಾಳಿ : ಕರ್ನಲ್ ಮುತ್ತಣ್ಣ ಮೈಸೂರು ಆಸ್ಪತ್ರೆಗೆ ದಾಖಲು

04/11/2020

ಮಡಿಕೇರಿ ನ.4 : ಕೊಡಗು ವೈಲ್ಡ್ ಲೈಫ್ ಸೊಸೈಟಿ ಅಧ್ಯಕ್ಷ, ಪರಿಸರವಾದಿ ನಿವೃತ್ತ ಕರ್ನಲ್ ಮುತ್ತಣ್ಣ ಅವರ ಮೇಲೆ ಕಾಡಾನೆಯೊಂದು ದಾಳಿ ಮಾಡಿದೆ. ಕಾಲು ಮುರಿತಕ್ಕೊಳಗಾಗಿರುವ ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗ್ಗೆ ಪಾಲಿಬೆಟ್ಟದಲ್ಲಿರುವ ತಮ್ಮ ತೋಟಕ್ಕೆ ಮುತ್ತಣ್ಣ ಅವರು ತೆರಳುತ್ತಿದ್ದಾಗ ಏಕಾಏಕಿ ಎದುರಿನಿಂದ ಬಂದ ಒಂಟಿ ಸಲಗ ದಾಳಿ ಮಾಡಿದೆ. ಈ ಸಂದರ್ಭ ಓಡುವಾಗ ಕೆಳಗೆ ಬಿದ್ದ ಮುತ್ತಣ್ಣ ಅವರ ಕಾಲು ಮುರಿತಕ್ಕೊಳಗಾಗಿದ್ದು, ತೋಟ ಕಾರ್ಮಿಕರು ಗೋಣಿಕೊಪ್ಪ ಆಸ್ಪತ್ರೆಗೆ ಕರೆದೊಯ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಲ್ ಮುತ್ತಣ್ಣ ಅವರು ಕೊಡಗಿನ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ವನ್ಯಜೀವಿಗಳ ಹಿತದೃಷ್ಟಿಯಿಂದ ಕೊಡಗಿಗೆ ರೈಲು ಮಾರ್ಗ, ಹೆದ್ದಾರಿ ವಿಸ್ತರಣೆ, ಚತುಷ್ಪಥ ರಸ್ತೆ ಮೊದಲಾದ ಪರಿಸರ ವಿರೋಧಿ ಕಾಮಗಾರಿಗಳ ವಿರುದ್ದ ನ್ಯಾಯಾಲಯದಲ್ಲಿ ಕಾನೂನಾತ್ಮಕ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ ಅವರ ಮೇಲೆಯೇ ಕಾಡಾನೆ ದಾಳಿ ಮಾಡಿರುವ ಪ್ರಕರಣ ನಡೆದಿದೆ.
ಪಾಲಿಬೆಟ್ಟ ಮತ್ತು ಸುತ್ತಲಿನ ಕಾಫಿ ತೋಟಗಳಲ್ಲಿ ಹಲವಾರು ವರ್ಷಗಳಿಂದ ಕಾಡಾನೆಗಳು ಮರಿಗಳ ಸಹಿತ ಠಿಕಾಣಿ ಹೂಡಿದ್ದು, ಸ್ಥಳೀಯರು ಆತಂಕದಲ್ಲೇ ದಿನದೂಡಬೇಕಾಗಿದೆ. ಮುತ್ತಣ್ಣ ಅವರಿಗೆ ಸಾಂತ್ವನ ಹೇಳಲು ಬಂದ ರೈತ ಸಂಘದ ಪ್ರಮುಖರು ಕಾಡಾನೆ ಹಾವಳಿ ವಿರುದ್ಧ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.