ಸುಂಟಿಕೊಪ್ಪದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಸಭೆ

November 4, 2020

ಸುಂಟಿಕೊಪ್ಪ,ನ.4: ಸುಂಟಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದ ಬೂತ್ ಸಭೆಯನ್ನು ತಾಲೂಕು ಪಂಚಾಯಿತಿ ಸದಸ್ಯೆ ವಿಮಲಾವತಿ ಅವರ ನಿವಾಸದಲ್ಲಿ ಆಯೋಜಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಶಕ್ತಿ ಕೇಂದ್ರದ ಪ್ರಮುಖ ಬಿ.ಕೆ.ಪ್ರಶಾಂತ್ ಮತ್ತು ಸಹ ಪ್ರಮುಖ್ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಎಲ್ಲಾ ಯುವಮೋರ್ಚಾಗಳ ಸಮಿತಿಯನ್ನು ರಚಿಸಬೇಕಾಗಿದೆ. ಬೂತ್ ಮಟ್ಟದಿಂದ ಕಾರ್ಯಕರ್ತರು ಪಕ್ಷವನ್ನು ಸಂಘಟನೆ ಮಾಡಬೇಕೆಂದರು.
ಸಭೆಯನ್ನು ಉದ್ದೇಶಿಸಿ ಪಕ್ಷದ ನಿಕಟಪೂರ್ವ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ ಮುಂದಿನ ದಿನಗಳು ಈ ಭಾಗಕ್ಕೆ ಮಹತ್ವದ ದಿನಗಳಾಗಿದ್ದು, ಕಾರ್ಯಕರ್ತರೆಲ್ಲಾರೂ ಒಗ್ಗಟ್ಟಿನಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಪಕ್ಷವು ತಳಮಟ್ಟದಿಂದ ಗಟ್ಟಿಯಾಗಿ ಬೇರೂರಿದರೆ ಮಾತ್ರ ಪಕ್ಷ ಬಲವರ್ಧನೆಗೊಳ್ಳಲು ಸಾಧ್ಯವೆಂದು ಪಕ್ಷದ ಕಾರ್ಯಕರ್ತರಿಗೆ ಹೇಳಿದರು.
ಸಭೆಯಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಪಟ್ಟೆಮನೆ ಉದಯಕುಮಾರ್, ಮಾಜಿ ಸದಸ್ಯರಾದ ಬಿ.ಎಂ.ಸುರೇಶ್, ಸಿ.ಚಂದ್ರ, ಧನು ಕಾವೇರಪ್ಪ, ಯುವಮೋರ್ಚಾ ಅಧ್ಯಕ್ಷ ಎಸ್.ವಿಘ್ನೇಶ್, ಹಿಂದುಳಿದ ವರ್ಗದ ಅಧ್ಯಕ್ಷ ಸಿ.ಸಿ.ಸುನೀಲ್,ಪುನೀತ್ ಕುಮಾರ್ ಹಾಗೂ ಶ್ರೀರಾಮ ರೈ, ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದರು.

error: Content is protected !!