ಮಡಿಕೇರಿಯಲ್ಲಿ ಬಿಜೆಪಿ ಸಭೆ : ಬಿಜೆಪಿ ಎಲ್ಲಾ ವರ್ಗದವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ : ರಾಜ್ಯ ಉಪಾಧ್ಯಕ್ಷ ಗೋವಿಂದರಾಜು

04/11/2020

ಮಡಿಕೇರಿ ನ.4 : ಭಾರತೀಯ ಜನತಾ ಪಾರ್ಟಿ ದೇಶದ ಎಲ್ಲಾ ವರ್ಗದವರಿಗೂ ಸಮಾನ ಅವಕಾಶವನ್ನು ಕಲ್ಪಿಸಿದ್ದು, ಶೋಷಿತ ವರ್ಗದ ಏಳಿಗೆಗಾಗಿ ಗಮನ ಹರಿಸುವುದರೊಂದಿಗೆ ರಾಜಕೀಯ ಪ್ರಾತಿನಿಧ್ಯವನ್ನು ಕೂಡ ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಗೋವಿಂದರಾಜು ತಿಳಿಸಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಡೆದ ಕಾರ್ಯಾಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹಿಂದುಳಿದ ವರ್ಗದÀ ನಾಯಕರಾಗಿ ಪಕ್ಷ ಸಂಘಟನೆ ಮಾಡಿದ ಫಲವಾಗಿ ಇಂದು ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರದಲ್ಲಿದ್ದಾರೆ. ಅಲ್ಲದೆ ಭಾರತವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಈ ರೀತಿಯ ನಾಯಕತ್ವದ ಬಗ್ಗೆ ತಿಳಿ ಹೇಳಿ ಎಲ್ಲಾ ವರ್ಗದವರನ್ನು ಒಗ್ಗೂಡಿಸುವ ಮೂಲಕ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಮತ್ತು ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕೆಂದು ಗೋವಿಂದರಾಜು ಕರೆ ನೀಡಿದರು.
ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಹಿಂದುಳಿದ ವರ್ಗದ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದು ಜನಮನ್ನಣೆ ಗಳಿಸಿದೆ. ಈ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕೆಂದು ತಿಳಿಸಿದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ವಿವೇಕಾನಂದ ಡಬ್ಬಿ, ರಾಜ್ಯ ಕಾರ್ಯದರ್ಶಿ ವಿಠಲ್ ಪೂಜಾರಿ, ಬಿ.ವೈ.ಆನಂದರಘು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಮಾದಪ್ಪ, ನಗರಾಧ್ಯಕ್ಷ ಮನುಮಂಜುನಾಥ್, ಪ್ರಧಾನ ಕಾರ್ಯದರ್ಶಿ ಗಣೇಶ್, ರಾಜೇಶ್ ಮತ್ತಿತರರು ಹಾಜರಿದ್ದರು.