ಶಾಲೆ ಪುನಾರಂಭ ಕುರಿತು ಸಧ್ಯದಲ್ಲೇ ನಿರ್ಧಾರ

05/11/2020

ಬೆಂಗಳೂರು ನ.5 : ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಮುಂದಿನ ಐದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರದ ಸಭೆಯಲ್ಲಿ ಶಾಲಾ ಪುನಾರಂಭ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.
ಸಂಬಂಧಿಸಿದ ಇಲಾಖೆಗಳ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಮದಿಗೆ ಸಭೆ ನಡೆಸಲಾಗುತ್ತದೆ ಮತ್ತು ಸನ್ನಿವೇಶಗಳನ್ನು ಪರಿಶೀಲಿಸಲಾಗುತ್ತಿದೆ. ಎಲ್ಲಾ ವಲಯಗಳಿಂದ ಪ್ರತಿಕ್ರಿಯೆ ಪಡೆದ ನಂತರ ಅದನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.