ಪೊಲೀಸರಿಂದ ಹಲ್ಲೆಯಾಗಿದೆ ಎಂದ ಅರ್ನಬ್

05/11/2020

ರಾಯ್‍ಗಢ್ ನ.4 : ತಮ್ಮನ್ನು ಬಂಧಿಸುವ ಮುನ್ನ ಪೊಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂಬ ಆರೋಪದ ಮೇಲೆ ಇಂದು ಬೆಳಗ್ಗೆ ಅವರ ನಿವಾಸಕ್ಕೆ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು.
ರಾಯ್ ಗಢ ಜಿಲ್ಲೆಯ ಅಲಿಬೌಗ್ ಪೊಲೀಸ್ ಠಾಣೆಗೆ ಪೊಲೀಸ್ ವಾಹನದಲ್ಲಿ ಕರೆತರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ನಬ್ ಗೋಸ್ವಾಮಿ, ನನ್ನ ಮೇಲೆ ಪೊಲೀಸರು ದೈಹಿಕ ಹಲ್ಲೆ ನಡೆಸಿದ್ದಾರೆ ಎಂದರು.
ಆದರೆ ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡುತ್ತಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮಖ್ ಹೇಳುತ್ತಾರೆ. ಕಾನೂನಿಗಿಂತ ಮೇಲೆ ಯಾರೂ ಅಲ್ಲ, ಮಹಾರಾಷ್ಟ್ರ ಪೊಲೀಸರು ಕಾನೂನು ಪ್ರಕಾರ ನಡೆದುಕೊಳ್ಳುತ್ತಾರೆ ಎಂದರು.
ಅರ್ನಬ್ ಗೋಸ್ವಾಮಿ ತಮಗೆ ಬಾಕಿ ಹಣವನ್ನು ನೀಡಿರಲಿಲ್ಲ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು 2018ರ ಮೇ ತಿಂಗಳಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಪ್ರಕರಣ ಸಂಬಂಧ ಅರ್ನಬ್ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು.