ರಾಜ್ಯದ ಮುಖ್ಯಮಂತ್ರಿ ಬದಲಾಗಲಿದ್ದಾರೆ !

05/11/2020

ಮೈಸೂರು ನ.5 : ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಎರಡು ದಿನಗಳ ಪ್ರವಾಸಕ್ಕಾಗಿ ನಗರಕ್ಕೆ ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈ ಕಮಾಂಡ್ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ.ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ತುಂಬು ನಂಬಿಕೆ ಇದೆ ಯಡಿಯೂರಪ್ಪ ಬದಲಾಗುತ್ತಾರೆ ಎಂಬುದು ಖಚಿತ. ತಮಗೆ ದೆಹಲಿಯಿಂದಿ ರುವ ಮಾಹಿತಿ ಆಧಾರದ ಮೇಲೆ ಈ ಮಾಹಿತಿ ನೀಡುತ್ತಿದ್ದೇನೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದು ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೇಳಗಿಳಿಯುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.