ಸೀರತ್ ಅಭಿಯಾನ : ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

November 5, 2020

ಮಡಿಕೇರಿ ನ. 5 : “ಪ್ರವಾದಿ ಮುಹಮ್ಮದ್ (ಸ) ಮಾನವತೆಯ ಮಾರ್ಗದರ್ಶಕ” ಎಂಬ ವಿಷಯದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸೀರತ್ ಅಭಿಯಾನದ ಅಂಗವಾಗಿ ವಲಯ ಮಟ್ಟದಲ್ಲಿ ಪತ್ರಕರ್ತರು ಮತ್ತು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಸಮಾಜ ಸುಧಾರಣೆಗೆ ಪ್ರವಾದಿ ಮುಹಮ್ಮದ್ ಅವರ ಕೊಡುಗೆ” ಎಂಬ ವಿಷಯದ ಪ್ರಬಂಧ ಸ್ಪರ್ಧೆಯ ಪೋಸ್ಟರನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸವಿತಾ ರೈ ಬಿಡುಗಡೆ ಗೊಳಿಸಿದರು.
ಈ ಸಂದರ್ಭ ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ಜಿ.ಹೆಚ್ ಮುಹಮ್ಮದ್ ಹನೀಪ್, ಅಭಿಯಾನದ ಸಂಚಾಲಕ ಎಮ್ ಅಬ್ದುಲ್ಲಾ, ಜಿಲ್ಲಾ ಸಾರ್ವಜನಿಕ ಸಂಪರ್ಕ ವಿಭಾಗದ ಸಂಚಾಲಕ ಸಿ.ಹೆಚ್ ಅಪ್ಸರ್ ಮತ್ತು ಜಿಲ್ಲಾ ಸಮಿತಿ ಸದಸ್ಯ ಎಂ.ಹೆಚ್ ಮೊಹಮ್ಮದ್ ಇದ್ದರು.

error: Content is protected !!