ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5013ಕ್ಕೆ ಏರಿಕೆ

November 6, 2020

ಮಡಿಕೇರಿ ನ. 6 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 37 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
29 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 8 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 14 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 21 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 18 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5013 ಆಗಿದ್ದು, 4794 ಮಂದಿ ಗುಣಮುಖರಾಗಿದ್ದಾರೆ. 150
ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 140 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಅವರು ತಿಳಿಸಿದ್ದಾರೆ.