ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ

06/11/2020

ಧಾರವಾಡ ನ.5 : ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಪೆÇಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಯೋಗೇಶ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗ್ಗೆಯಿಂದ ಸತತ 9 ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದರು.
ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ 6 ಮಂದಿಯ ತಂಡ ಕುಲಕರ್ಣಿಯನ್ನು ವಶಕ್ಕೆ ಪಡೆದು, ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದಿತ್ತು. ವಿನಯ್ ಕುಲಕರ್ಣಿ ತನ್ನದೇ ವಾಹನದಲ್ಲಿ ಪೆÇಲೀಸ್ ಠಾಣೆಗೆ ಆಗಮಿಸಿದರು.