ಸಿದ್ಧಲಿಂಗಪುರ-ಅರಸಿನಕುಪ್ಪೆಯಲ್ಲಿ ಶ್ರೀಮಂಜುನಾಥ, ನವನಾಗ ಸನ್ನಿಧಿಯಲ್ಲಿ ಪಂಚಮಿ ಪೂಜೆ

November 6, 2020

ಸೋಮವಾರಪೇಟೆ ನ.6 : ತಾಲ್ಲೂಕಿನ ಸಿದ್ಧಲಿಂಗಪುರ-ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀಮಂಜುನಾಥ ಮತ್ತು ನವನಾಗ ಸನ್ನಿಧಿಯಲ್ಲಿ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀರಾಜೇಶ್‍ನಾಥ್‍ಜೀ ಅವರ ಮಾರ್ಗದರ್ಶನದಲ್ಲಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಬೆಳಗ್ಗಿನಿಂದ ಗಣಪತಿ ಹೋಮ, ಅಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ನಡೆ¬ತು.
ನಂತರ ನವನಾಗ ಸನ್ನಿಧಿಯಲ್ಲಿ ವಿವಿಧ ಅಭಿಷೇಕ, ಪಂಚಮಿ ಪೂಜೆ, ತಂಬಿಲ ಸೇವೆ, ವಿಶೇಷ ಅಲಂಕಾರ ಪೂಜೆ, ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಅರ್ಚಕ ಜಗದೀಶ್ ಉಡುಪ, ಮಯೂರ ಅವರುಗಳ ಪೌರೋಹಿತ್ವದಲ್ಲಿ ಪೂಜಾ ಕಾರ್ಯಗಳು ನಡೆದವು. ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಪಂಡ ಮುತ್ತಪ್ಪ, ಕಾರ್ಯದರ್ಶಿ ಪ್ರಕಾಶ್, ದೇವಾಲಯ ಸಮಿತಿ ಅಧ್ಯಕ್ಷ ಮೋಹನ್, ಕಾರ್ಯದರ್ಶಿ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.