ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗೆ ದಾಖಲಾತಿ ಆರಂಭ

06/11/2020

ಮಡಿಕೇರಿ ನ.6 : ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳು ದಾಖಲಾತಿ ಹೊಂದಲು ದಿನಾಂಕ ನಿಗದಿಪಡಿಸಲಾಗಿದೆ.
ಪ್ರಥಮ ಪಿಯುಸಿ ತರಗತಿಗೆ ದಾಖಲಾಗಲು ನವೆಂಬರ್, 27 ಕೊನೆಯ ದಿನ. ದ್ವಿತೀಯ ಪಿಯುಸಿ ತರಗತಿಗೆ ದಾಖಲಾಗಲು ನವೆಂಬರ್, 13 ಕೊನೆಯ ದಿನ. 2021 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ನವೆಂಬರ್, 12 ಕೊನೆಯ ದಿನ (ದಂಡ ಶುಲ್ಕವಿಲ್ಲದೆ), ದಂಡ ಶುಲ್ಕಗಳೊಂದಿಗೆ ದಾಖಲಾಗಲು ನವೆಂಬರ್, 26 ಕೊನೆಯ ದಿನವಾಗಿದೆ.
ಖಾಸಗಿ ಅಭ್ಯರ್ಥಿಯ ನೋಂದಣಿ ಸಂಬಂಧ ಹೆಚ್ಚಿನ ಮಾಹಿತಿಗೆ ಸನಿಹದಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಎಂ.ಮಹಾಲಿಂಗಯ್ಯ ಅವರು ತಿಳಿಸಿದ್ದಾರೆ.