ಕೊಡಗಿನಲ್ಲಿ 15 ಹೊಸ ಕೋವಿಡ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 5028

07/11/2020

ಮಡಿಕೇರಿ ನ. 7 : ಜಿಲ್ಲೆಯಲ್ಲಿ ಶನಿವಾರ 15 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 8 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5028 ಆಗಿದ್ದು, 4814 ಮಂದಿ ಗುಣಮುಖರಾಗಿದ್ದಾರೆ. 145
ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 130 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಅವರು ತಿಳಿಸಿದ್ದಾರೆ.