ಕ್ರೈಸ್ತರ ಅಭಿವೃದ್ಧಿ ಯೋಜನೆಯಡಿ ಅರ್ಜಿ ಆಹ್ವಾನ

November 7, 2020

ಮಡಿಕೇರಿ ನ.7 : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2020-21 ನೇ ಸಾಲಿನಲ್ಲಿ ಕ್ರೈಸ್ತರ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಶ್ರಮ ಮತ್ತು ವೃದ್ಧಾಶ್ರಮಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸಂಘ/ ಸಂಸ್ಥೆಗಳು ನಿಗಧಿತ ಅರ್ಜಿಯನ್ನು ಕಚೇರಿಯಿಂದ ಪಡೆದು ತ್ರಿಪ್ರತಿಯಲ್ಲಿ ದಾಖಲಾತಿಗಳೊಂದಿಗೆ ಸಲ್ಲಿಸುವುದು.
ದಾಖಲಾತಿಗಳು: ನಿಗಧಿತ ಅರ್ಜಿ ನಮೂನೆ ಸಂಸ್ಥೆಯ ನೊಂದಣಿ ಪತ್ರ ಹಾಗೂ ನಿವೇಶನ ಪತ್ರ (ಆರ್‍ಟಿಸಿ), ಸಂಸ್ಥೆಯ ಆಡಳಿತ ಮಂಡಳಿ ಪಟ್ಟಿ ಹಾಗೂ ಆಡಿಟ್ ರಿಪೋರ್ಟ್, ಕಾಮಗಾರಿಯ ಅಂದಾಜುಪಟ್ಟಿ (ಅಭಿಯಂತರರಿಂದ ಅನುಮೋದಿತ). ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ www.gokdom.kar.nic.in ಅನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272-225528/220214 ಹಾಗೂ ಇಲಾಖಾ ವೆಬ್‍ಸೈಟ್ www.gokdom.kar.nic.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ಅವರು ತಿಳಿಸಿದ್ದಾರೆ.

error: Content is protected !!