ಗೋಣಿಕೊಪ್ಪಲಿನಲ್ಲಿ ನ.10 ರಂದು ಜನ ಸಂಪರ್ಕ ಸಭೆ

November 7, 2020

ಮಡಿಕೇರಿ ನ.7 : ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಸೆಸ್ಕ್. ಚಾ.ವಿ.ಸ.ನಿ.,ನಿ ರವರ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲು ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ನ. 10 ರಂದು ಬೆಳಗ್ಗೆ 11 ಗಂಟೆಯಿಂದ 12:30 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಹಾಗೆಯೇ ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಸೆಸ್ಕ್. ಚಾ.ವಿ.ಸ.ನಿ.,ನಿ ರವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ನವೆಂಬರ್, 10 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಗೋಣಿಕೊಪ್ಪಲು ಹಾಗೂ ವಿರಾಜಪೇಟೆ ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

error: Content is protected !!