ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5052 : ಸಕ್ರಿಯ ಪ್ರಕರಣಗಳು 149

November 8, 2020

ಮಡಿಕೇರಿ ನ.8 : ಜಿಲ್ಲೆಯಲ್ಲಿ ಭಾನುವಾರ 24 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. 22 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5052 ಆಗಿದ್ದು, 4834 ಮಂದಿ ಗುಣಮುಖರಾಗಿದ್ದಾರೆ. 149 ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 124 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 1ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 14 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 13 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.