ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ.ವಿ.ನಾಗೇಶ್ ಆಯ್ಕೆ

November 9, 2020

ಮಡಿಕೇರಿ ನ.9 : ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ.ವಿ.ನಾಗೇಶ್ ಹಾಗೂ ಉಪಾಧ್ಯಕ್ಷರಾಗಿ ಆ್ಯನಿ ಫಾತಿಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಸಭಾಂಗಣದಲ್ಲಿ ಸರ್ವ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿ ಮಾತನಾಡಿದ ನಾಗೇಶ್, ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಮೈಕ್ರೋ ಕೈಗಾರಿಕೆಗಳು ಹಾಗೂ ಸಣ್ಣ ಉದ್ಯಮಗಳು ಸಂಕಷ್ಟದಲ್ಲಿವೆ. ತಯಾರಾಗುವ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯಾಪಾರಸ್ಥರೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ಯಮಿಗಳಿಗೆ ನ್ಯಾಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಸರ್ಕಾರಿ ಕಾಮಗಾರಿಗಳಿಗೆ ಸ್ಥಳೀಯ ಉತ್ಪನ್ನಗಳನ್ನು ಬಳಕೆ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಮತ್ತು ಸಹಕಾರ ಸಂಘದ ಅಭಿವೃದ್ಧಿಗೆ ನೆರವು ನೀಡಬೇಕೆಂದು ಮನವಿ ಮಾಡಿದರು.
ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಸಂಘವನ್ನು ಪ್ರಗತಿ ಪಥದತ್ತ ಕೊಂಡೊಯ್ಯುವ ವಿಶ್ವಾಸವನ್ನು ನಾಗೇಶ್ ವ್ಯಕ್ತಪಡಿಸಿದರು.
ಉಪಾಧ್ಯಕ್ಷೆ ಆ್ಯನಿ ಫಾತಿಮ, ನಿರ್ದೇಶಕರುಗಳಾದ ಸಿ.ಎಂ.ಯಶವಂತ್, ಎ.ಜೇಕಬ್, ಎಂ.ಜಿ.ಲಲಿತ, ಹೊಸೂರು ಜೆ.ಸತೀಶ್ ಕುಮಾರ್ ಹಾಗೂ ಆಶಾ ಚಿಣ್ಣಪ್ಪ ಉಪಸ್ಥಿತರಿದ್ದರು.
ಸಹಕಾರ ಇಲಾಖೆಯ ಎಸ್.ಎಂ.ರಘು, ಸಿಇಓ ಎಸ್.ಕೆ.ಕಾರ್ಯಪ್ಪ, ಖಾದಿ ಹಾಗೂ ಗ್ರಾಮದ್ಯೋಗದ ವ್ಯವಸ್ಥಾಪಕ ನಿರ್ದೇಶಕ ರಘು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

error: Content is protected !!