ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5076 : 158 ಪ್ರಕರಣಗಳು ಸಕ್ರಿಯ

November 9, 2020

ಮಡಿಕೇರಿ ನ.9 : ಜಿಲ್ಲೆಯಲ್ಲಿ ಸೋಮವಾರ 24 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5076 ಆಗಿದ್ದು, 4849 ಮಂದಿ ಗುಣಮುಖರಾಗಿದ್ದಾರೆ. 158 ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 120 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಮಾಹಿತಿ ನೀಡಿದ್ದಾರೆ.
17 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 7 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 3 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ವಿರಾಜಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.