ಕೆಎಎಸ್ ಡಾ.ಸುಧಾ ನಿವಾಸದಲ್ಲಿ 3.7 ಕೆಜಿ ಚಿನ್ನ

November 10, 2020


ಬೆಂಗಳೂರು ನ.9 : ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿರುವ ಕೆಎಎಸ್ ಅಧಿಕಾರಿ ಡಾ.ಸುಧಾ ಅವರ ನಿವಾಸದಿಂದ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ಐಜಿಪಿ ಚಂದ್ರಶೇಖರ್ ಹೇಳಿದ್ದಾರೆ.
ಇತ್ತೀಚೆಗೆ ಡಾ.ಸುಧಾ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು, ಉಡುಪಿ, ಮೈಸೂರು ಸೇರಿ ಒಟ್ಟು ಏಳು ಸ್ಥಳಗಳಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ 36.89 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದರು.
ಬ್ಯಾಂಕ್ ಖಾತೆಯಲ್ಲಿ 3.5ಕೋಟಿ ರೂ. ಠೇವಣಿ ಹಾಗೂ 20ಕ್ಕೂ ಹೆಚ್ಚು ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಸ್ಥಿರಾಸ್ತಿ ಕ್ರಯ ಪತ್ರಗಳು, ಜಿಪಿಎ ಕರಾರುಗಳು, ಖರೀದಿ ಒಪ್ಪಂದ ಸೇರಿದಂತೆ 200 ಆಸ್ತಿ ಪತ್ರಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದರು.

error: Content is protected !!