ಗೋಸ್ವಾಮಿಗೆ ಮಧ್ಯಂತರ ಜಾಮೀನು ಇಲ್ಲ

10/11/2020

ಮುಂಬೈ ನ.10 : 2018 ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
“ತನ್ನ ಅಸಾಮಾನ್ಯ ವ್ಯಾಪ್ತಿಯನ್ನು ಬಳಕೆ ಮಾಡುವುದಕ್ಕೆ ಕೋರ್ಟ್ ಎದುರು ಯಾವುದೇ ಸ್ಪಷ್ಟವಾದ ಕಾರಣಗಳಿಲ್ಲ” ಎಂದು ಅರ್ಜಿ ವಿಚಾರಣೆ ನಡೆಸಿರುವ ಎಸ್‍ಎಸ್ ಶಿಂಧೆ ಹಾಗೂ ಎಂಎಸ್ ಕರ್ಣಿಕ್ ಅವರಿದ್ದ ಪೀಠ ಹೇಳಿದೆ.
ಅರ್ಜಿದಾರ ಅರ್ನಬ್ ಗೋಸ್ವಾಮಿ ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ಅರ್ಜಿ ಸಲ್ಲಿಸಿ ಸಾಮಾನ್ಯವಾದ ಜಾಮೀನನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹೈಕೋರ್ಟ್ ಹೇಳಿದೆ.