ಮಹಿಳಾ ಜೆಡಿಎಸ್ ಉಪಾಧ್ಯಕ್ಷರಾಗಿ ಪಿ.ಬಿ.ಪ್ರೇಮ ಆಯ್ಕೆ

10/11/2020

ಮಡಿಕೇರಿ ನ.10 : ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಕೆ.ನಿಡುಗಣೆ ಗ್ರಾಮದ ಪಿ.ಬಿ.ಪ್ರೇಮ ಆಯ್ಕೆಯಾಗಿದ್ದಾರೆ.
ನಗರದಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಉಪಾಧ್ಯಕ್ಷ ಸ್ಥಾನದ ಅಧಿಕಾರ ನೀಡಿದರು.
ಈ ಸಂದರ್ಭ ಮಾತನಾಡಿದ ಪಿ.ಬಿ.ಪ್ರೇಮ, ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಮಹಿಳಾ ಶಕ್ತಿಯನ್ನು ಹೆಚ್ಚಿಸಲಾಗುವುದು ಎಂದರು. ತಮಗೆ ಪಕ್ಷದಲ್ಲಿ ಉತ್ತಮ ಹುದ್ದೆ ನೀಡಿದ ಜಿಲ್ಲಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದರು.