ನ.13 ರಂದು ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕ ಕುರಿತು ತರಬೇತಿ

10/11/2020

ಮಡಿಕೇರಿ ನ.10 : ಕೃಷಿ ಇಲಾಖೆ ವತಿಯಿಂದ ನವೆಂಬರ್, 13 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಹೋಬಳಿಯ ನರಿಯಂಡ ಗ್ರಾಮದ ಚೇಯ್ಯಂಡಾಣೆಯ ಲಕ್ಷ್ಮಿ ಮಹಿಳಾ ಸಮಾಜದ ಆವರಣದಲ್ಲಿ ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕ ಕುರಿತು ತರಬೇತಿ ಕಾರ್ಯಕ್ರಮ ನಡೆಯಲಿದೆ.
ನಾಪೋಕ್ಲು ಹೋಬಳಿಯ ಹಾಗೂ ಸ್ಥಳೀಯ ರೈತರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಹೋಬಳಿ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.