ತಡೆಗೋಡೆ ಕಾಮಗಾರಿ ಪರಿಶೀಲಿಸಿದ ಎಂಎಲ್‍ಸಿ ವೀಣಾಅಚ್ಚಯ್ಯ

November 10, 2020

ಮಡಿಕೇರಿ ನ.10 : ಬೆಟ್ಟಗೇರಿಯ ಅಶ್ರಫ್ ಎಂಬುವವರ ಮನೆಯ ಹಿಂಬದಿ ನಿರ್ಮಿಸಲಾಗುತ್ತಿರುವ ತಡೆಗೋಡೆ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಪರಿಶೀಲಿಸಿದರು.
ಜಿಲ್ಲೆಯಲ್ಲಿ 2019ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಬರೆ ಕುಸಿದು ಅಪಾಯಕಾರಿ ಪರಿಸ್ಥಿತಿ ಎದುರಾಗಿತ್ತು. ತಡೆಗೋಡೆ ನಿರ್ಮಿಸಿಕೊಡುವಂತೆ ಸ್ಥಳೀಯರು ವೀಣಾಅಚ್ಚಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಅವರು, ತಮ್ಮ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸ್ಥಳೀಯ ಕಾಂಗ್ರೆಸ್ ಮುಖಂಡ ಬೆಟ್ಟಗೇರಿ ಮೊಯ್ದು ಮತ್ತಿತರರು ಉಪಸ್ಥಿತರಿದ್ದರು.

error: Content is protected !!