ಶಿರಾದಲ್ಲಿ ಬಿಜೆಪಿಗೆ ಮೊದಲ ಜಯ

November 11, 2020

ಬೆಂಗಳೂರು ನ.11 : ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಬಿಜೆಪಿಯ ರಾಜೇಶ್ ಗೌಡ ಅವರು 72,739 ಮತಗಳನ್ನ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ವೋಟ್ಗಳನ್ನ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

error: Content is protected !!